Kannada NewsLatestNationalPolitics

*ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ವರಿಷ್ಠೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅವರನ್ನು ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮಾಹಿತಿ ಪ್ರಕಾರ ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಹಿಂದೆ, ಮಾರ್ಚ್ 25 ರಂದು, ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹವಾಮಾನದಲ್ಲಿನ ದಿಢೀರ್ ಬದಲಾವಣೆಯಿಂದ ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.


Related Articles

Back to top button