
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಕೇವಲ 4 ದಿನಗಳು ಮಾತ್ರ ಬಾಕಿಯಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷದ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಅಬ್ಬರದ ಪ್ರಚಾರ, ರೋಡ್ ಶೋ ನಡೆಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಆಗಮಿಸಿದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ಗೆ ತೆರಳಿರುವ ಸೋನಿಯಾ ಗಾಂಧಿ ಉತ್ತರ ಕರ್ನಾಟಕ ಭಾಗದ ರಾಜಕೀಯ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ನಾಯಕರಿಂದ ಮಾಹಿತಿ ಸಂಗ್ರಹಿಸಿದ್ದಾರೆ.
ಸೋನಿಯಾ ಗಾಂಧಿಯವರು ಇಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ