ಇಂದು ಸೋನಿಯಾ ವಿಚಾರಣೆ: ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ

ಶುಕ್ರವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕಿತ್ತೂರಿಗೆ

 

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಇಂದು ವಿಚಾರಣೆ ನಡೆಸಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ  ಸೋನಿಯಾ ಗಾಂಧಿ ಇಡಿ ಕಚೇರಿಗೆ ಹಾಜರಾಗಲಿದ್ದಾರೆ.

ಈ ಹಿಂದೆ ಸೋನಿಯಾ ಗಾಂಧಿ ವಿಚಾರಣೆ ನಿಗದಿಯಾಗಿತ್ತಾದರೂ ಕೊರೋನಾ ಕಾರಣದಿಂದ ಅವರು ಹಾಜರಾಗಿರಲಿಲ್ಲ. ರಾಜೀವ ಗಾಂಧಿ ಅವರನ್ನು 50 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.

ಇಲ್ಲದ ಪ್ರಕರಣವನ್ನು ಸೃಷ್ಟಿ ಮಾಡಿ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ನವದೆಹಲಿಯ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದ್ದು, ಬೆಂಗಳೂರಿನಲ್ಲೂ ಬೃಹತ್ ಪ್ರತಿಭಟನೆ ಆರಂಭವಾಗಿದೆ.

ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿಯಲ್ಲಿ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ಹಮ್ಮಿಕೊಂಡಿದೆ. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಮಾಜಿ ಸಚಿವ ವಿನಯ ಪಾಟೀಲ ಸೇರಿದಂತೆ ಹಲವಾರು ನಾಯಕರು ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕಿತ್ತೂರಿಗೆ ಆಗಮಿಸಿ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

“ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳು ನಿರ್ದೇಶನ ನೀಡಿದ ಪ್ರಕಾರ ಬಿ.ಜೆ.ಪಿ ಕೇಂದ್ರ ಸರಕಾರದ ದ್ವೇಷ ರಾಜಕಾರಣದಿಂದ ನಮ್ಮೆಲ್ಲರ ನೆಚ್ಚಿನ ರಾಷ್ಟ್ರ ನಾಯಕಿ ಎ.ಐ.ಸಿ.ಸಿ ಗೌರವಾನ್ವಿತ ಅಧ್ಯಕ್ಷರಾದ  ಸೋನಿಯಾ ಗಾಂಧಿಯವರನ್ನು ಸುಳ್ಳು ಆರೋಪಗಳನ್ನು ಹೊರಿಸಿ ಇಡಿ ಅಧಿಕಾರಿಗಳು ಕಿರುಕುಳ ನೀಡುತ್ತಿರುವದಲ್ಲದೇ ಅವರಿಗೆ ಸಮನ್ಸ್ ನೀಡಿದ್ದಾರೆ. ಇದೆಲ್ಲವನ್ನೂ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಹಾಗೂ ದಿನಾಂಕ 22/07/2022 ರಂದು ರಾಜ್ಯದ ಪ್ರತಿ ಜಿಲ್ಲೆಯ ಕೇಂದ್ರ ಸ್ಥಳದಲ್ಲಿ “ಪ್ರತಿಭಟನಾ ಕ್ಯಾ” ನಡೆಸಲು ಎ.ಐ.ಸಿ.ಸಿ ನಿರ್ದೇಶನ ನೀಡಿದೆ” ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.
ಈ ಸಂಬಂಧ ಶುಕ್ರವಾರ ದಿನಾಂಕ 22/07/2022 ರಂದು ಬೆಳಗ್ಗೆ 11:00 ಗಂಟೆಗೆ ಸರಿಯಾಗಿ ಬೆಳಗಾವಿಯ “ಕಾಂಗ್ರೆಸ್ ಭವನ”ದಲ್ಲಿ ಸೇರಿ ಅಲ್ಲಿಂದ ಬೃಹತ ಪ್ರತಿಭಟನಾ ರಾಲಿ ಮೂಲಕ ಚನ್ನಮ್ಮಾ ಸರ್ಕಲ್ ಸುತ್ತು ಹಾಕಿ ಜಿಲ್ಲಾಧಿಕಾರಿ ಕಚೇರಿಗೆ ತೆರ೪ ಮನವಿ ಸಲ್ಲಿಸಲಾಗುವದು. ಈ ಪ್ರತಿಭಟನೆಯಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷರಾದ  ಎಮ್. ಬಿ. ಪಾಟೀಲರವರು, ಕೆ.ಪಿ.ಸಿ.ಸಿ ಉಸ್ತುವಾರಿ ಉಪಾಧ್ಯಕ್ಷರಾದ ವಿನಯ ಕುಲಕರ್ಣಿ ಹಾಗೂ ಶಾಸಕರು/ ವಿಧಾನ ಪರಿಷತ್ ಸದಸ್ಯರು/ ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು/ 2018/19/22ರ ವಿಧಾನ ಸಭೆ/ಪರಿಷತ್ / ಲೋಕಸಭಾ ಅಭ್ಯರ್ಥಿಗಳು/ಕೆ.ಪಿ.ಸಿ.ಸಿಯ ಉಪಾಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು/ ಬ್ಲಾಕ್ ಅಧ್ಯಕ್ಷರು/ ಮುಂಚೂಣಿ ಘಟಕಗಳ ಜಿಲ್ಲಾ ಅಧ್ಯಕ್ಷರು/ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು/ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪಕ್ಷದ ಹಿರಿಯ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.
ಅದೇ ದಿನ ಸಾಯಂಕಾಲ 6  ಗಂಟೆಗೆ ಕೆ.ಪಿ.ಸಿ.ಸಿ ಗೌರವಾನ್ವಿತ ಅಧ್ಯಕ್ಷ  ಡಿ. ಕೆ. ಶಿವಕುಮಾರ  75ನೇ ವರ್ಷದ ಸ್ವಾತಂತ್ರ್ಯ ವಜ್ರಮಹೋತ್ಸವದ ಪ್ರಯುಕ್ತ ಕಿತ್ತೂರಿನಲ್ಲಿರುವ ರಾಣಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲು ಕಿತ್ತೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಮುಖಂಡರು ಉಪಸ್ಥಿತರರುತ್ತಾರೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ಸಿನ ಅಧ್ಯಕ್ಷ ವಿನಯ ಬಾ ನಾವಲಗಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

 

ಬೆಳಗಾವಿಯ ನಂ.1 ಬಸ್ ತಂಗುದಾಣ ಕಂಡರೆ ಕಂಗಾಲಾಗ್ತೀರಾ !

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button