Belagavi NewsBelgaum NewsKannada NewsKarnataka NewsNationalPolitics

*ಕುಂಭಮೇಳದಲ್ಲಿ ಕಾಲ್ತುಳಿತ : ರಾಜ್ಯ ಸರ್ಕಾರದ ಸಹಾಯವಾಣಿ ಸಂಪರ್ಕಿಸಿ*

ಪ್ರಗತಿವಾಹಿನಿ ಸುದ್ದಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿದ್ದ ಕುಂಭಮೇಳದಲ್ಲಿ ರಾಜ್ಯದ ನಾಲ್ವರು ಸಾವನ್ನಪ್ಪಿದ ಮಾಹಿತಿ ಬರುತ್ತಿದೆ. ಅಲ್ಲದೆ ಕೆಲವರು ಗಾಯಗೊಂಡಿದ್ದಾರೆ, ಇನ್ನೂ ಕೆಲವರು ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಬರುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸಹಾಯವಾಣಿಯನ್ನೂ ತೆರೆದಿದ್ದು, ಕುಂಭಮೇಳಕ್ಕೆ ಹೊರಟು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಕೋರಿದೆ.

ಸಹಾಯವಾಣಿ ಸಂಖ್ಯೆ 080-22340676 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. ರಾಜ್ಯದ ವಿಪತ್ತು ನಿರ್ವಹಣಾ ತಂಡ ಉತ್ತರಪ್ರದೇಶ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ, ಕನ್ನಡಿಗರ ಹಿತರಕ್ಷಣೆಗಾಗಿ ಓರ್ವ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಹಾಗೂ ಪೊಲೀಸ್‌ ಅಧಿಕಾರಿಯೊಬ್ಬರನ್ನೊಳಗೊಂಡ ಮೂರು ಜನರ ತಂಡವನ್ನು ಈಗಾಗಲೇ ಪ್ರಯಾಗ್ ರಾಜ್‌ಗೆ ಕಳುಹಿಸಲಾಗಿದೆ.

Home add -Advt

Related Articles

Back to top button