ಪ್ರಗತಿವಾಹಿನಿ ಸುದ್ದಿ: ತಾಯಿಯನ್ನು ಕೊಲೆಗೈದ ಮಗ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.
ಮಹಾಲಕ್ಷ್ಮೀ (41) ಮಗನಿಂದಲೇ ಕೊಲೆಯಾದ ಮಹಿಳೆ. ರಮೇಶ್ (21) ಹೆತ್ತ ತಾಯಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಗ. ಚಿತ್ರದುರ್ಗ ಮೂಲದ ಕುಟುಂಬ ಕೆಲಸ ಅರೆಸಿಕೊಂಡು ಬಂದು ಚಂದಾಪುರದಲ್ಲಿ ಹಲವು ವರ್ಷಗಳಿಂದ ವಾಸವಾಗಿತ್ತು.
ಕುಡಿದು ಬಂದ ಮಗ ತಾಯಿಜೊತೆ ಜಗಳವಾಡಿದ್ದ. ಇಬ್ಬರ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಮೊಬೈಲ್ ಚಾರ್ಜರ್ ವೈರ್ ನಿಂದ ತಾಯಿ ಕತ್ತಿಗೆ ಬಿಗಿದು ಸಾಯಿಸಿದ್ದಾನೆ. ಬಳಿಕ ತಾನು ನೇಣಿಗೆ ಕೊರಳೊಡ್ಡಿದ್ದಾನೆ.
ಸೂರ್ಯನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ