
ಪ್ರಗತಿವಾಹಿನಿ ಸುದ್ದಿ: ಕಾನೂನು ಬಾಹಿರವಾಗಿ ಮಗು ದತ್ತು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಸೋನು ಗೌಡ ರಾಯಚೂರು ಮೂಲದ ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಸೋನು ಗೌಡ ಅವರನ್ನು ಬಂಧಿಸಿದ್ದರು.
ಇಂದು ಸೋನು ಗೌಡ ಅವರನ್ನು ಬೆಂಗಳೂರಿನ ಸಿಜೆಎಂ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಕೋರ್ಟ್ ಸೋನು ಗೌಡ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ