Film & Entertainment
*ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಕನ್ನಡಿಗರನ್ನು ಕೆಣಕಿದ್ದ ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ನಿಷೇಧ ಹೇರಲಾಗಿದೆ. ಈ ಬಗ್ಗೆ ಫಿಲ್ಮ್ ಚೇಂಬರ್ ನಿರ್ಧಾರ ಕೈಗೊಂಡಿದೆ.
ಬೆಂಗಳೂರಿನಲ್ಲಿ ಫಿಲಂ ಚೇಬರ್ ನಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಸೋನು ನಿಗಮ್ ಅವರಿಂದ ಕನ್ನಡ ಹಾಡು ಹಾಡಿಸಲ್ಲ. ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲ್ಲ. ಕರ್ನಾಟಕದಲ್ಲಿ ವಾಸ್ತವ್ಯ ಹೂಡಲೂ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ.
ಈ ಬಗ್ಗೆ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಮಾಹಿತಿ ನೀಡಿದ್ದು, ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ, ಕನ್ನಡದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕ್ಷಮೆ ಕೋರುವಂತೆ ಆಗ್ರಹಿಸಿದರೂ ಯಾವುದೇ ಕ್ಷಮೆ ಕೇಳಿಲ್ಲ. ಹಾಗಾಗಿ ಇನ್ಮುಂದೆ ಸೋನು ನಿಗಮ್ ಅವರಿಂದ ಕನ್ನಡ ಹಾಡು ಹಾಡಿಸಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಗಳಲ್ಲಿ ಅವರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.




