Latest

ನಟ ಸೋನು ಸೂದ್ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಪಂಜಾಬ್ ಚುನಾವಣೆಯಲ್ಲಿ ಸಹೋದರಿ ಪರ ಚುನಾವಣೆ ಪ್ರಚಾರ ನಡೆಸಿದ್ದ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಮೊಗಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ನಟ ಸೋನು ಸೂದ್ ಸಹೋದರಿ ಪರ ಚುನಾವಣೆ ಪ್ರಚಾರ ನಡೆಸಿದ್ದರು.

ನೀತಿ ಸಂಹಿತೆ ಉಲ್ಲಂಘಿಸಿ ಮತದಾನದ ದಿನವಾದ ಭಾನುವಾರದಂದು ಸೋನು ಸೂದ್ ಮೊಗಾ ಕ್ಷೇತ್ರದ ಹಲವು ಮತಗಟ್ಟೆಗಳಿಗೆ ಭೇಟಿ ನೀಡಿದ್ದಲ್ಲದೇ ಸಹೋದರಿ ಪರ ಪ್ರಚಾರ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಸೋನು ಸೂದ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು.

ಇದೀಗ ಮೊಗಾ ಪೊಲೀಸರು ಸೋನು ಸೂದ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸದ ಸೇರಿ ನಾಲ್ವರು ಹಿಂದೂ ಮುಖಂಡರ ಹತ್ಯೆಗೆ ಸಂಚು?

Home add -Advt

Related Articles

Back to top button