
ಪ್ರಗತಿವಾಹಿನಿ ಸುದ್ದಿ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಖಾಸಗಿ ಬಸ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 45 ಜನ ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದು, ಇವರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದಾರೆ.
ಅಪಘಾತದಲ್ಲಿ ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಅಬ್ದುಲ್ ಘಣಿ ಎಂಬುವವರು ಮೃತಪಟ್ಟ ಬಗ್ಗೆ ದೃಢಪಟ್ಟಿತ್ತು. ಇದೀಗ ಬೀದರ್ ಮೂಲದ ಮಹಿಳೆಯೊಬ್ಬರು ಕೂಡ ಇದೇ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೀದರ್ ಮೂಲದ ಮಹಿಳೆ ರಹಮತ್ ಬಿ (80) ಎಂಬ ಮಹಿಳೆ ಸೌದಿ ಅರೇಬಿಯಾದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೀದರ್ ನ ಮೈಲೂರಿನ ಸಿಎಂಸಿ ಕಾಲೋನಿ ನಿವಾಸಿಯಾದ ರಹಮತ್, ಹೈದರಾಬಾದ್ ಮೂಲಕ ಸೌದಿ ಅರೇಬಿಯಾಗೆ ಯಾತ್ರೆಗೆ ತೆರಳಿದ್ದರು.
ಮೆಕ್ಕಾದಿಂದ ಮದೀನಾಕ್ಕೆ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್, ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, 45 ಸಜೀವದಹನವಾಗಿದ್ದಾರೆ.




