Kannada NewsKarnataka NewsLatestNational

*ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಕರಣದ ಮರು ತನಿಖೆಗೆ ಮಹತ್ವದ ಆದೇಶ ನೀಡಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸಿ, ಮುಂದಿನ 3 ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದ್ದು, ಹೊಸ ತಂಡದಿಂದ ಸ್ವತಂತ್ರವಾಗಿ ಮರು ತನಿಖೆ ನಡೆಸುವಂತೆ ಸೂಚಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button