CrimeKarnataka NewsLatest

*ಸೌಜನ್ಯ ಪ್ರಕರಣ*: *SITಗೆ ಮುಚ್ಚಿದ ಲಕೋಟೆ ನೀಡಿ ಸ್ಫೋಟಕ ಹೇಳಿಕೆ ನೀಡಿದ ಜಯಂತ್*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮರುತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದೆ ವೇಳೆ ಸಾಮಾಜಿಕ ಹೋರಾಟಗಾರ ಜಯಂತ್ ಟಿ, ಎಸ್​ಐಟಿ ಕಚೇರಿಗೆ ಭೇಟಿ ನೀಡಿದ್ದು, ಮುಚ್ಚಿದ ಲಕೋಟೆಯೊಂದನ್ನು ನೀಡಿದ್ದಾರೆ.

ಎಸ್​ಐಟಿ ಕಚೇರಿಯಲ್ಲಿ ಸುಧೀರ್ ಕುಮಾರ್ ರೆಡ್ಡಿ ಇಲ್ಲದ ಕಾರಣ, ಪೊಲೀಸ್ ಕಮಿಷನರ್ ಕಚೇರಿಗೆ ಬಂದು ಲಕೋಟೆ ನೀಡಿದ್ದಾರೆ. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಚ್ಚಿದ ಲಕೋಟೆಯಲ್ಲಿ ಒಂದಿಷ್ಟು ಜನರ ಹೆಸರನ್ನು ಕೊಟ್ಟಿದ್ದೇನೆ. ಅವರಿಗೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಬಗ್ಗೆ ಮಾಹಿತಿ ಇದೆ. ಅವರು ಕೂಡ ಅದರಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದಿದ್ದಾರೆ.

ಅಲ್ಲದೇ ಅವರನ್ನು ಸಾಕ್ಷಿ ಅಥವಾ ಆರೋಪಿಯನ್ನಾಗಿಸಿ ವಿಚಾರಣೆ ಮಾಡಬಹುದು. ದಕ್ಷ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರ ಕಚೇರಿಗೆ ಲಕೋಟೆ ಕೊಟ್ಟು ಅವರಿಗೆ ವಿಷಯ ತಿಳಿಸಿದ್ದೇನೆ. ಅವರನ್ನೆಲ್ಲಾ ಈ ಹಿಂದೆ ಪೊಲೀಸರು, ಸಿಐಡಿ, ಸಿಬಿಐ ತನಿಖೆ ಮಾಡಿಲ್ಲ ಹಾಗಾಗಿ ಅವರ ತನಿಖೆ ಮಾಡಿದರೆ ಸತ್ಯ ಹೊರಬರುತ್ತೆ’ ಎಂದು ತಿಳಿಸಿದ್ದಾರೆ. ಜಯಂತ್ ಮಾಹಿತಿ ನೀಡಿದವರ ತನಿಖೆಯನ್ನು ಎಸ್ಐಟಿ ಮಾಡಲಿದೆಯೇ? ಕಾದುನೋಡಬೇಕಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button