Kannada NewsLatestNational

*ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆಗೆ ಒಪ್ಪಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಸೌಜನ್ಯ ತಾಯಿ ಕುಸುಮವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ಪ್ರಕರಣದ ಮರುತನಿಖೆಗೆ ಸಮ್ಮತಿ ನೀಡಿದೆ. ಇದೇ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಘಟನೆ ನಡೆದು ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮಂದುವರಿಸಿ ಎಂದು ಸೂಚಿಸಿದೆ.

ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿ ತನ್ನ ತೀರ್ಪನ್ನು ಕಾಯ್ದಿರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರ ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲು ಸಂಪೂರ್ಣ ಸಿದ್ಧವಿರುವುದಾಗಿ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button