ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದಷ್ಟೇ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಪ್ರಕರಣಕ್ಕೊಂದು ಟ್ವಿಸ್ಟ್ ಸಿಕ್ಕಿದೆ.
ಸೌಂದರ್ಯ ಜಗದೀಶ್ ಸಾವಿಗೂ ಮುನ್ನ ಬರೆದಿಟ್ಟಿದ್ದರು ಎನ್ನಲಾದ ಡೆತ್ ನೋಟ್ ಮನೆಯಲ್ಲಿ ಪತ್ತೆಯಾಗಿದ್ದು, ಅವರ ಪತ್ನಿ ಶಶಿರೇಖಾ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸೌಂದರ್ಯ ಜಗದೀಶ್ ಅವರ ವ್ಯವಹಾರದ ಪಾಲುದಾರರ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಡೆತ್ ನೋಟ್ ನಲ್ಲಿ ಸೌಂದರ್ಯ ಕನ್ ಸ್ಟ್ರಕ್ಷನ್ ಮೂವರು ಪಾಲುದಾರರಿಂದ ಬ್ಯುಸಿನೆಸ್ ಲಾಸ್ ಆಗಿದ್ದು, 60 ಕೋಟಿ ನಷ್ಟವುಂಟುಮಾಡಿ ನನಗೆ ವಂಚಿಸಿದ್ದಾರೆ. ಜೊತೆಗಿದ್ದವರಿಂದಲೇ ಆದ ಮೋಸ, ವಂಚನೆಯಿಂದ ಮನನೊಂದಿದ್ದೇನೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಸೌಂದರ್ಯ ಜಗದೀಶ್ ಪತ್ನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ವ್ಯವಹಾರದ ಪಾಲುದಾರರಾಗಿರುವ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ