National

*ಸೌರವ್ ಗಂಗೂಲಿ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್ ಪ್ರೆಸ್ ವೇನಲ್ಲಿ ಘಟನೆ ನಡೆದಿದೆ.

ಸೌರವ್ ಗಂಗೂಲಿ ಬರ್ಧಮಾನ್ ಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತ ಸಂಭವಿಸಿದೆ. ಲಾರಿಯೊಂದು ಇದ್ದಕ್ಕಿದ್ದಂತೆ ಗಂಗೂಲಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಈ ವೇಳೆ ಗಂಗೂಲಿ ಅವರ ಕಾರು ಚಾಲಕ ದಿಢೀರ್ ಬ್ರೇಕ್ ಹಾಕಿ ಕಾರು ನಿಲ್ಲಿಸಿದ್ದಾರೆ. ಇದರಿಂದಾಗಿ ಗಂಗೂಲಿ ಅವರ ಕಾರಿನ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಒಂದು ಬೆಂಗಾವಲು ವಾಹನ ಗಂಗೂಲಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಗೂಲಿ ಅವರು ಪಾರಾಗಿದ್ದಾರೆ. ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button