Latest

ತೀರ್ಥ ಯಾತ್ರೆಗೆ ತೆರಳಿದ್ದ ಬಸ್ ಅಪಘಾತ; 9 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮೆಕ್ಸಿಕೋ: ತೀರ್ಥ ಯಾತ್ರೆಗೆ ತೆರಳಿದ್ದ ಬಸ್ ಅಪಘಾತಕ್ಕೀಡಾಗಿ 9 ಭಕ್ತರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ದಕ್ಷಿಣ ಮೆಕ್ಸಿಕೋದಲ್ಲಿ ನಡೆದಿದೆ.

ಧಾರ್ಮಿಕ ಯಾತ್ರೆಗೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ತಿಲಾ ಟೌನ್ ಶಿಪ್ ನಲ್ಲಿ ಪಲ್ಟಿಯಾಗಿದೆ ಪರಿಣಾಮ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 40 ಜನರು ಗಾಯಗೊಂಡಿದ್ದಾರೆ.

ಬಸ್ ಅಪಘಾತದ ಬಗ್ಗೆ ದಕ್ಷಿಣ ರಾಜ್ಯ ಚಿಯಾಪಾಸ್ ನಲ್ಲಿರುವ ನಾಗರಿಕ ರಕ್ಷಣಾ ಕಚೇರಿ ತಿಳಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಫೀಸ್ಟ್ ಆಫ್ ಕಾರ್ಪಸ್ ಕ್ರಿಸ್ಟಿ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button