Latest

ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ, ಚೆನ್ನೈ – ಕಳೆದ ಒಂದೂವರೆ ತಿಂಗಳಿನಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರವಾಗಿದೆ.

ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲಿಟಿನ್ ನಲ್ಲಿ ಕಳೆದ 24 ಗಂಟೆಯಲ್ಲಿ ಎಸ್ ಪಿಬಿ ಆರೋಗ್ಯ ಕ್ಷೀಣಿಸುತ್ತ ಸಾಗಿದೆ ಎಂದಿದೆ. ಆಗಸ್ಟ್ 5ರಂದೆ ಕೊರೋನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸುಧಾರಿಸಿದೆ ಎಂದು ಕಳೆದ ವಾರ ತಿಳಿಸಲಾಗಿತ್ತು. ಶೀಘ್ರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದೂ ಹೇಳಲಾಗಿತ್ತು

ಆದರೆ ಈಗ ಕೃತಕ ಉಸಿರಾಟದ ವ್ಯವಸ್ಥಾ ಮಾಡಲಾಗಿದ್ದು, ಆರೋಗ್ಯ ತೀರಾ ಹದಗೆಟ್ಟಿದೆ. ಎಸ್ಪಿಬಿ ಕುಟುಂಬಸ್ಥರೆಲ್ಲ ಈಗಾಗಲೆ ಚೆನ್ನೈ ತಲುಪಿದ್ದಾರೆ. ಹಲವಾರು ಹಿರಿಯ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.

Related Articles

Back to top button