ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣಾ ವ್ಯವಸ್ಥೆ ಬಗ್ಗೆ ಮಾತನಾಡುತ್ತಾ ವಿಧಾನಸಭಾ ಸ್ಪೀಕರ್ ವಿಶ್ವೇಷ್ವರ ಹೆಗಡೆ ಕಾಗೇರಿ ಕಣ್ಣೀರು ಹಾಕಿದ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ಕಾಗೇರಿ, ಚುನಾವಣಾ ವ್ಯವಸ್ಥೆ ಸುಧಾರಣೆ ಬಹುದೊಡ್ಡ ಜವಾಬ್ದಾರಿ. ಈ ಬಗ್ಗೆ ಸದನದಲ್ಲಿ ಚರ್ಚಿಸುವ ಅಗತ್ಯವಿದೆ. ಸಂವಿಧಾನದ ಬಗ್ಗೆ ಚರ್ಚಿಸಿದ್ದೇವೆ. ಬೇರೆ ಬೇರೆ ವಿಚಾರಗಳ ಬಗ್ಗೆ ಮುಕ್ತವಾಗಿ ಚರ್ಚೆಗಳು ನಡೆಯಬೇಕು ಎಂದರು.
ನಮ್ಮನ್ನು ನಾವು ಸೀಮಿತ ಚೌಕಟ್ಟಿನಲ್ಲಿ ಕಟ್ಟಿಹಾಕಿಕೊಂಡಿದ್ದೇವೆ. ಜೀವನದ ಕಲ್ಪನೆ, ಸಾರ್ಥಕತೆಯ ಭಾವವೇ ನಮಗೆ ಇಲ್ಲದಾಗಿದೆ. ನಂಬಿಕೆಗಳು, ವಿಶ್ವಾಸ ಬರದೆ ಹೋದರೆ ವ್ಯವಸ್ಥೆ ನಡೆಸಲು ಸಾಧ್ಯವಿಲ್ಲ. ಯಾವ ವ್ಯವಸ್ಥೆಯಲ್ಲಿ ನಾವಿದ್ದೇವೋ, ಸಮಾಜ ಇದೆಯೋ ಆ ವ್ಯವಸ್ಥೆಯನ್ನು ಸರಿಯಾಗಿ ನಡೆಸಬೇಕು ಎಂದಾದರೆ ನಮ್ಮ ಜ್ಞಾನವನ್ನು ವಿಸ್ತಾರ ಮಾಡಿಕೊಳ್ಳುವ ಪ್ರಯತ್ನಗಳಾಗಬೇಕು. ಅಂತಹ ಪ್ರಯತ್ನಗಳನ್ನು ನಾವೆಲ್ಲರೂ ಮಾಡೋಣ ಎಂದು ಹೇಳುತ್ತಾ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಸ್ಪೀಕರ್ ಕಾಗೇರಿ, ಸೋಮವಾರದಿಂದ ವಿಧಾನಮಂದಲ ಅಧಿವೇಶನ ಆರಮ್ಭವಾಗಲಿದೆ. ಈವರೆಗೆ 2 ವಿಧೇಯಕಗಳು ನನ್ನ ಕಚೇರಿಗೆ ಬಂದಿವೆ. ಕರ್ನಾಟಕ ಕ್ರಿಮಿನಲ್ ಆಕ್ಟ್ ವಿಧೇಯಕ, ಕರ್ನಾಟಕ ಸ್ಟ್ಯಾಂಪ್ ವಿಧೇಯಕ. 2 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳು ಬಂದಿವೆ. ಕೋವಿಡ್ ನಿಯಮದಂತೆ ಜಂಟಿ ಅಧಿವೇಶನ ನಡೆಯಲಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು ಎಂದು ತಿಳಿಸಿದರು.
ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ ಕರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ