ಪ್ರಗತಿವಾಹಿನಿ ಸುದ್ದಿ: ಇಂದು ಸಂಜೆ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದಾಗಿದೆ ಎಂದು ತಿಳಿದುಬಂದಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದರು. ಆದರೆ ಈ ಸಭೆ ಇದೀಗ ರದ್ದಾಗಿದೆ.
ವಿಶೇಷ ಸಚಿವ ಸಂಪುಟ ಸಭೆ ರದ್ದು ಪಡಿಸಲು ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ