*ವಿಶೇಷ ಸಚಿವ ಸಂಪುಟ ಸಭೆ ದಿಢೀರ್ ರದ್ದು*
ಪ್ರಗತಿವಾಹಿನಿ ಸುದ್ದಿ: ಇಂದು ಸಂಜೆ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದಾಗಿದೆ ಎಂದು ತಿಳಿದುಬಂದಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದರು. ಆದರೆ ಈ ಸಭೆ ಇದೀಗ ರದ್ದಾಗಿದೆ. ವಿಶೇಷ ಸಚಿವ ಸಂಪುಟ ಸಭೆ ರದ್ದು ಪಡಿಸಲು ಕಾರಣ ತಿಳಿದುಬಂದಿಲ್ಲ. *ಸಚಿವರಿಂದ ರಾಜಭವನ ಚಲೋಗೆ ಕರೆ*
Copy and paste this URL into your WordPress site to embed
Copy and paste this code into your site to embed