
ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು – ಕಿತ್ತೂರು ಮತ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಬಿಜೆಪಿ ಕಿತ್ತೂರ ಮಂಡಳ ಅಧ್ಯಕ್ಷ ಬಸವರಾಜ ಪರವನ್ನವರ ಅವರಾದಿ ಗ್ರಾಮದಲ್ಲಿ ಪ್ರಧಾನಮಂತ್ರಿ ಜಲ್ ಜೀವನ್ ಮಿಷನ್ ಯೋಜನೆಯಡಿ ಹಮ್ಮಿಕೊಂಡ ವಿಶೇಷ ಗ್ರಾಮಸಭೆಯಲ್ಲಿ ಪಾಲ್ಗೊಂಡು ಜನರ ಸಮಸ್ಯೆಗಳನ್ನು ಆಲಿಸಿದರು.

ಕಾರ್ಯಕ್ರಮದಲ್ಲಿ ಕಿತ್ತೂರ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಭಾಸ ಸಂಪಗಾಂವಿ, ಗ್ರಾ.ಕು.ನೀ & ನೈ ವಿಭಾಗದ ಎಇಇ ಎಚ್.ಕೆ ವಂಟಗೋಡಿ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ