Latest

24 ಗಂಟೆಯಲ್ಲಿ 74,442 ಜನರಲ್ಲಿ ಕೊರೊನಾ ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಸ್ವಲ್ಪ ತಗ್ಗಿದಂತಿದೆ. ಕಳೆದ 24ಗಂಟೆಯಲ್ಲಿ 74,442 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 66,23,816ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 903 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,02,685ಕ್ಕೆ ಏರಿಕೆಯಾಗಿದೆ.

Home add -Advt

ದೇಶದಲ್ಲಿ 9,34,427 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 55,86,704 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು ದೇಶಾದ್ಯಂತ ನಿನ್ನೆ ಒಂದೇ ದಿನದಲ್ಲಿ 9,89,860 ಜನರಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 7,99,82,394 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

Related Articles

Back to top button