Politics

*ಮುಖ್ಯ ಕಾರ್ಯದರ್ಶಿಗೆ ಡಿಸಿಎಂ ಪತ್ರ: ಅಧಿಕಾರ ಹಸ್ತಾಂತರದ ಘಳಿಗೆ ಸಮೀಪಿಸುತ್ತಿದೆ ಎಂದ ವಿಪಕ್ಷ ನಾಯಕ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ವಿಚಾರವಾಗಿ, ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಗುದ್ದಾಟ ವಿಸ್ಫೋಟವಾಗಲಿದೆ ಎಂದು ಟಾಂಗ್ ನೀಡಿದ್ದಾರೆ.

Home add -Advt

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಅಧಿಕಾರ ಹಸ್ತಾಂತರದ ಘಳಿಗೆ ಹತ್ತಿರ ಬರುತ್ತಿದ್ದಂತೆ ವಿಸ್ಪೋಟವಾಗುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಕಾಣುತ್ತಿದ್ದು, ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷಕ್ಕೆ ಪುಷ್ಟಿ ನೀಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಕರ್ನಾಟಕದ ಅಭಿವೃದ್ಧಿ ಸೊರಗುತ್ತಿದೆ ಎಂದು ಕಿಡಿಕಾರಿದ್ದಾರೆ.

https://twitter.com/RAshokaBJP/status/1928009923444756978?t=McFjhiI5Aj1AHg9uAbNTZA&s=08


Related Articles

Back to top button