ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಬೆಳಗಾವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಖಡೋಬಜಾರ್ ಹನುಮಾನ್ ಮಂದಿರದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ವಿಶ್ವಹಿಂದೂ ಪರಿಷತ್ ನ ಉತ್ತರಕರ್ನಾಟಕ ಪ್ರಾಂತ ಸಹಕೋಶಾಧ್ಯಕ್ಷ ಕೃಷ್ಣ ಭಟ್, ಇದೊಂದು ಅತ್ಯಂತ ಅವಿಸ್ಮರಣೀಯ ಘಳಿಗೆ. ಇಡೀ ಪ್ರಕರಣವನ್ನು ಅಧ್ಯಯನ ಮಾಡಿ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಹಿರಿಯರು ನಿಜವಾಗಿಯೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಅವರೆಲ್ಲರೂ ಪೂಜೆಗೆ ಅರ್ಹರಾಗಿದ್ದಾರೆ ಎಂದರು.
ರಾಮಮಂದಿರಕ್ಕೆ ಸಂಬಂಧಿಸಿದಂತೆ ಇದ್ದ ಎಲ್ಲ ವಿಘ್ನಗಳೂ ರಾಮನ ಆಶಿರ್ವಾದದಿಂದ ಕೊನೆಗೊಂಡಿದೆ. ಸಮಸ್ತ ಹಿಂದುಗಳಿಗೆ ಖುಷಿ ತಂದಿದೆ ಎಂದೂ ಅವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ