Latest

ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಪ್ರಗತಿವಾಹಿನಿ ಸುದ್ದಿ; ಕಟಕ್: ಪೋಕ್ಸೋ ನ್ಯಾಯಾಲದ ನ್ಯಾಯಾಧೀಶರೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ಕಟಕ್ ನಲ್ಲಿರ್ ನಡೆದಿದೆ.

ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಆತ್ಮಹತ್ಯೆಗೆ ಶರಣಾದ ಜಡ್ಜ್. ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಟಕ್ ನಗರದ ಮನೆಯಲ್ಲಿ ಪತ್ತೆಯಾಗಿದೆ ಎಂದು ಸಹಾಯಕ ಪೊಲೀಸ್ ಕಮಿಷ್ನರ್ ತಪನ್ ಚಂದ್ರ ಪ್ರಧಾನ್ ತಿಳಿಸಿದ್ದಾರೆ.

ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಎರಡು ದಿನಗಳ ರಜೆ ಬಳಿಕ ಶುಕ್ರವಾರ ಕೆಲಸಕ್ಕೆ ಮರಳಬೇಕಿತ್ತು. ಆದರೆ ಅವರು ಶುಕ್ರವಾರದಿಂದ ರಜೆಗಾಗಿ ಮತ್ತೆ ಅರ್ಜಿ ಬರೆಯುವಂತೆ ಹೇಳಿ ಬರೆಸಿದ್ದರು ಎಂದು ನ್ಯಾಯಾಧೀಶರ ಸ್ಟೆನೋಗ್ರಾಫರ್ ಆರ್ ಎನ್ ಮಹಾಪಾತ್ರ ತಿಳಿಸಿದ್ದಾರೆ.

ನ್ಯಾಯಾಧೀಶರ ಪತ್ನಿ ಹಾಗೂ ಮಗಳು ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ. ವಿಷಯ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ನ್ಯಾಯಾಧೀಶರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಸಮಸ್ಯೆ ಹೇಳಲು ಬಂದ ಮಹಿಳೆಯನ್ನೇ ಬಾಯಿಗೆ ಬಂದಂತೆ ನಿಂದಿಸಿದ ಬಿಜೆಪಿ ಶಾಸಕ

https://pragati.taskdun.com/politics/mla-aravinda-limbavaliinsultwoman/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button