Belagavi NewsBelgaum NewsKannada NewsKarnataka News

ಬೆಳಗಾವಿ-ಮೈಸೂರು ಮತ್ತು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ – ಸಂಸದ ಈರಣ್ಣ ಕಡಾಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ  ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಗೆ ಒಂದು ಟ್ರಿಪ್ ಹಾಗೂ ಮೈಸೂರು ಮತ್ತು ಧಾರವಾಡ ನಡುವೆ ವಿಶೇಷ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ ಆದೇಶಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು

ಶನಿವಾರ ಅ-21ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಮೈಸೂರು-ಬೆಳಗಾವಿ ರೈಲು (06205) ಅ.22 ರ ರಾತ್ರಿ 10.30 ಕ್ಕೆ ಮೈಸೂರು ನಿಲ್ದಾಣದಿಂದ ಹೊರಟು 23 ರ ಬೆಳಗ್ಗೆ 10.45 ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಮೈಸೂರು ರೈಲು (06206) ಅ.23 ರ ಮಧ್ಯಾಹ್ನ 02.30 ಕ್ಕೆ ಬೆಳಗಾವಿಯಿಂದ ಹೊರಟು 24 ರ ರಾತ್ರಿ 03.00 ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ. 

ಮೈಸೂರು-ಬೆಳಗಾವಿ ರೈಲು (06205) ಅ.24 ರ ರಾತ್ರಿ 10.30 ಕ್ಕೆ ಮೈಸೂರು ನಿಲ್ದಾಣದಿಂದ ಹೊರಟು 25 ರ ಬೆಳಗ್ಗೆ 10.45 ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಮೈಸೂರು ರೈಲು (06206) ಅ.25 ರ ಮಧ್ಯಾಹ್ನ 02.30 ಕ್ಕೆ ಬೆಳಗಾವಿಯಿಂದ ಹೊರಟು 26 ರ ರಾತ್ರಿ 03.00 ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ. 

ಬೆಳಗಾವಿ-ಬೆಂಗಳೂರು ರೈಲು (07307) ಅ.24 ರ ಸಂಜೆ 07.30 ಕ್ಕೆ ಬೆಳಗಾವಿ ನಿಲ್ದಾಣದಿಂದ ಹೊರಟು 25 ರ ಬೆಳಗ್ಗೆ 06.55 ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣಕ್ಕೆ ತಲುಪಲಿದೆ.

ಬೆಂಗಳೂರು-ಬೆಳಗಾವಿ ರೈಲು (07308) ಅ.25 ರ ಸಂಜೆ 05.30 ಕ್ಕೆ ಬೆಂಗಳೂರಿನಿAದ ಹೊರಟು 26 ರ ರಾತ್ರಿ 04.30 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ. 

ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button