Kannada NewsKarnataka News

ವಿಶೇಷ ಹವಾಮಾನ ವರದಿ : ಮುಂದಿನ 1 ವಾರ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ನವೆಂಬರ್ 29ರ ರಾತ್ರಿ ತಮಿಳುನಾಡಿನ ಚೆನೈ ಮೂಲಕ ಭೂ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ನವೆಂಬರ್ 30ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. 

ಪರಿಣಾಮವಾಗಿ ನವೆಂಬರ್ 30ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರಿ ಮಳೆಯ ಆತಂಕವಿದೆ. 

Home add -Advt

ಮುಂದಿನ 1 ವಾರದ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ. 29.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ.

ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ನವೆಂಬರ್ 30ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಇದರ ಪರಿಣಾಮದಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ನವೆಂಬರ್ 30ರಿಂದ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿಸೆಂಬರ್ 1ರಿಂದ ಉಳಿದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚೆನೆ ಇದೆ. 

Related Articles

Back to top button