
ಪ್ರಗತಿವಾಹಿನಿ ಸುದ್ದಿ, ಸತ್ತಿಗೇರಿ – ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉದ್ಯಮಿ ಪಾಂಡುರಂಗ ರಡ್ಡಿ ಅವರಿಗೆ ಅವಕಾಶ ಸಿಗಲಿ ಎಂದು ಸತ್ತಿಗೇರಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಶ್ರೀ ಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಮಾಡಿಸಿದರು.

ಪಾಂಡುರಂಗ ರಡ್ಡಿ ಅವರು ಸಂಘ ಪರಿವಾರದ ಎಲ್ಲ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರಿಗೆ ಟಿಕೆಟ್ ಸಿಗುವಂತಾಗಲಿ ಎಂದು ಪೂಜೆ ಸಲ್ಲಿಸಿರುವುದಾಗಿ ಕಾರ್ಯಕರ್ತರು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ