Kannada News

*ನಿರ್ಮಾಣವಾದ ಒಂದೇ ದಿನದಲ್ಲಿ ಯುವಕನನ್ನು ಬಲಿಪಡೆದ ಅವೈಜ್ಞಾನಿಕ ಸ್ಪೀಡ್ ಬ್ರೇಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅವೈಜ್ಞಾನಿಕ ಸ್ಪೀಡ್ ಬ್ರೇಕರ್ ಯುವಕನೋರ್ವನನ್ನು ಬಲಿ ಪಡೆದ ಘಟನೆ ಬೆಳಗಾವಿ ಜಿಲ್ಲೆಯ ಮಹಾಂತೇಶ ನಗರದಲ್ಲಿ ನಡೆದಿದೆ.

23 ವರ್ಷದ ಪ್ರತೀಕ್ ಫಕೀರಪ್ಪ ಹೊಂಗಲ ಮೃತ ಯುವಕ. ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಸ್ಪೀಡ್ ಬ್ರೇಕರ್ ಇರುವುದು ಗಮನಕ್ಕೆ ಬಾರದೇ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದಾನೆ. ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಇಂದು ಮುಂಜಾನೆ ರಕ್ತದ ಮಡುವಲ್ಲಿ ರಸ್ತೆಯಲ್ಲಿ ಒದ್ದಾಡುತ್ತಿದ್ದ ಯುವಕನನ್ನು ಸ್ಥಳೀಯರೊಬ್ಬರು ಗಮನಿಸಿದ್ದಾರೆ. ಆಂಬುಲೆನ್ಸ್ ಕರೆಸುವಷ್ಟರಲ್ಲಿ ಯುವಕ ಪ್ರಾಣ ಬಿಟ್ಟಿದ್ದಾನೆ.

ನಿನ್ನೆಯಷ್ಟೇ ಈ ಸ್ಪೀಡ್ ಬ್ರೇಕರ್ ಅಳವಡಿಸಲಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಹಾಂತೇಶ್ ನಗರದ ಹಲವೆಡೆಗಳಲ್ಲಿ ಈ ರೀತಿಯ ಅವೈಜ್ಞಾನಿಕ ಸ್ಪೀಡ್ ಬ್ರೇಕರ್ ನಿರ್ಮಿಸಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

Home add -Advt

Related Articles

Back to top button