Kannada NewsLatestNational
*ಆಕಾಶ್ ಏರ್ ಹಾಗೂ ಸ್ಪೈಸ್ ಜೆಟ್ ವಿಮಾನ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಆಕಾಶ ಏರ್ ವಿಮಾನಕ್ಕೆ ಸ್ಪೈಸ್‌ಜೆಟ್ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಎರಡೂ ಜೆಟ್‌ಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಲ್ಯಾಂಡಿಂಗ್ ಆಗುತ್ತಿದ್ದ ವಿಮಾನ ಹಾಗೂ ಟೇಕ್ ಆಫ್ ಆಗುತ್ತಿದ್ದ ವಿಮಾನ ಎರಡೂ ಪರಸ್ಪರ ಡಿಕ್ಕಿ ಹೊಡೆದಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ.
ಎರಡೂ ವಿಮಾನಗಳ ರೆಕ್ಕೆಗಳಿಗೆ ಭಾರಿ ಹಾನಿಯಾಗಿದೆ. ಎರಡೂ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಪ್ರಯಾಣಿಕರಿಗೆ ಬೇರೆ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

