
ಪ್ರಗತಿವಾಹಿನಿ ಸುದ್ದಿ: ಜೊಲ್ಲೆ ಗ್ರೂಪ್ ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೊಸಾಯಿಟಿ ಲಿ.,ಯಕ್ಸಂಬಾ (ಮಲ್ಟಿ -ಸ್ಟೇಟ್) ಸಂಸ್ಥೆಗೆ 2025 ರಿಂದ 2030 ರ ಅವಧಿಗೆ ನೂತನವಾಗಿ ಅವಿರೋಧವಾಗಿ ಆಯ್ಕೊಗೊಂಡ ನಿರ್ದೇಶಕ ಮಂಡಳಿ ಘೋಷಣೆ ಹಾಗೂ ಸತ್ಕಾರ ಸಮಾರಂಭದಲ್ಲಿ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಯವರು ಭಾಗವಹಿಸಿ,ನಿರ್ದೇಶಕರನ್ನು ಸತ್ಕರಿಸಿ ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಸಹಾಯಕ ಚುನಾವಣಾ ಅಧಿಕಾರಿಗಳಾದ ವಿಜಯ ರಾವುತನವರ ಅವರನ್ನು ಸತ್ಕರಿಸಿದರು.
1991ರಲ್ಲಿ ಗ್ರಾಮ ದೇವರಾದ ಶ್ರೀ ಬೀರೇಶ್ವರ ಹೆಸರಿನಲ್ಲಿ ಪ್ರಾರಂಭವಾದ ಸಂಸ್ಥೆ ಇಂದು ರಾಜ್ಯ, ಅಂತಾರಾಜ್ಯ ಮಟ್ಟದಲ್ಲಿ ಬೆಳೆದು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಲ್ಲಿ 226 ಶಾಖೆಗಳನ್ನು ಹೊಂದಿ ಕಾರ್ಯನಿರ್ವಹಿಸುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ