ಭಕ್ತರ ಗಮನಕ್ಕೆ: ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲು

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಭಕ್ತರ ಸಂಖ್ಯೆ ಹೆಚ್ಚಿದ ಹಿನ್ನಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ದರ್ಶನ ಸಮಯವನ್ನು ದೇವಳದ ಆಡಳಿತ ಮಂಡಳಿ ಬದಲಾವಣೆ ಮಾಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಹಾಗೂ ದೇವರ ದರ್ಶನ ಪಡೆಯುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ದೇವಳದ ಆಡಳಿತ ಮಂಡಳಿಯು ದರ್ಶನ ಸಮಯವನ್ನು ಬದಲಾಯಿಸಿದೆ.

ಸಾಮಾನ್ಯ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನಕ್ಕೆ ಬೆಳಗ್ಗೆ 6.30 ರಿಂದ ಮಧ್ಯಾಹ್ನ 2.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಸಂಜೆ 5 ಗಂಟೆಯಿಂದ ರಾತ್ರಿ 8.30 ರವರೆಗೆ ದೇವರ ದರ್ಶನ ಪಡೆಯಬಹುದುದಾಗಿದೆ.

ಭಾನುವಾರ, ಸೋಮವಾರ ಹಾಗೂ ವಿಶೇಷ ದಿನಗಳಲ್ಲೂ ದರ್ಶನ ಸಮಯ ಬದಲಾವಣೆಯಾಗಿದೆ. ವಿಶೇಷ ದಿನಗಳಲ್ಲಿ ಬೆಳಗ್ಗೆ 6.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ದೇವರ ದರ್ಶನ ಪಡೆಯಬಹುದಾಗಿದೆ. ಬಳಿಕ ಸಂಜೆ 5.30ರಿಂದ ರಾತ್ರಿ 9 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಹಿಂದೆ ಬೆಳಗ್ಗೆ 6.30 ಗಂಟೆಯಿಂದ11.30ವರೆಗೆ ದರ್ಶನ ಬಳಿಕ ಮಧ್ಯಾಹ್ನ 12.30 ರಿಂದ 2.30 ವರೆಗೆ ದೇವರ ದರ್ಶನಕ್ಕೆ ಅವಕಾಶವಿತ್ತು. ಮಧ್ಯಾಹ್ನ 2.30 ರಿಂದ4 ಗಂಟೆಯವರೆಗೆ ದೇವಸ್ಥಾನದ ಬಾಗಿಲು ಬಂದ್ ಆಗುತ್ತಿತ್ತು. ನಂತರ 4 ಗಂಟೆಯಿಂದ ರಾತ್ರಿ 8.30ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಭಕ್ತರ ಅನುಕೂಲಕ್ಕಾಗಿ ದರ್ಶನದ ಸಮಯವನ್ನು ಹೆಚ್ಚುವರಿಯಾಗಿ‌ ಮಾಡಿದ್ದು, ಭಕ್ತರು ಸಹಕಾರಿಸುವಂತೆ ಆಡಳಿತ ಮಂಡಳಿ ವಿನಂತಿ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button