
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ ಮತ್ತು ಸಂಸದ ಡಿ.ಕೆ ಸುರೇಶ ಅವರನ್ನು ಭೇಟಿಯಾದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ ವಿಶ್ವ ಹಿಂದು ಪರಿಷತ್ತಿನ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಅವರನ್ನು ಭೇಟಿಯಾಗಿ ಅಭಿಯಾನದ ಬಗ್ಗೆ ವಿವರವಾಗಿ ತಿಳಿಸಿದರು.
ಜೊತೆಯಲ್ಲಿ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ ಮಂಜುನಾಥ ಸ್ವಾಮಿ ವಿಶ್ವ ಹಿಂದು ಪರಿಷತ್ ಮಾಧ್ಯಮ ವಿಭಾಗ ಅವರು ಕೂಡ ಉಪಸ್ಥಿತರಿದ್ದರು.




