



ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರದ ಸ್ಲ್ಯಾಬ್ ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (MLA Fund) ಯೋಜನೆಯಡಿಯಲ್ಲಿ 10 ಲಕ್ಷ ರೂ,ಗಳ ವೆಚ್ಚದಲ್ಲಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗ್ರಾಮಸ್ಥರು ಅತ್ಯಂತ ಮುತುವರ್ಜಿಯಿಂದ ದೇವಸ್ಥಾನ ಕಾಮಗಾರಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಖುಷಿ ತಂದಿದೆ. ಎಲ್ಲರೂ ಸೇರಿ ಸುಸಜ್ಜಿತವಾಗಿ ಮತ್ತು ಸಮಯ ಮಿತಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳುತ್ತಿರುವುದು ಶ್ಲಾಘನೀಯ. ಗ್ರಾಮಸ್ಥರ ಮೇಲೆ ದೇವರ ಆಶಿರ್ವಾದವಿರಲಿ ಎಂದು ಚನ್ನರಾಜ ಹಟ್ಟಿಹೊಳಿ ಹಾರೈಸಿದರು.
ಈ ಸಂದರ್ಭದಲ್ಲಿ ಮೃಣಾಲ ಹೆಬ್ಬಾಳಕರ್, ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ದೇವಸ್ಥಾನದ ಕಮೀಟಿಯವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ