Latest

ಸಚಿವ ಶ್ರೀರಾಮುಲುಗೆ ಶಾಕ್ ನೀಡಿದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಹಿಂಪಡೆದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರಿಗೆ ಹೆಚ್ಚುವರಿಯಾಗಿ ಆರೋಗ್ಯ ಇಲಾಖೆಯನ್ನೂ ನೀಡಿ ಆದೇಶ ಹೊರಡಿಸಿದೆ.

ರಾಜ್ಯದ ಮೂವರು ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಿರುವ ಸಿಎಂ ಬಿ ಎಸ್ ಯಡಿಯೂರಪ್ಪ, ರಾಮುಲು ಬಳಿಯಿದ್ದ ಆರೋಗ್ಯ ಹಾಗೂ ಹಿಂದುಳಿದ ವರ್ಗಗಳ ಖಾತೆಯನ್ನು ಹಿಂಪಡೆದು, ಗೋವಿಂದ ಕಾರಜೋಳ ಬಳಿಯಿದ್ದ ಸಮಾಜ ಕಲ್ಯಾಣ ಖಾತೆಯನ್ನು ನೀಡಿದ್ದಾರೆ.

Home add -Advt

ಸಚಿವ ಡಾ.ಸುಧಾಕರ್ ಗೆ ಭರ್ಜರಿ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ, ಶ್ರೀರಾಮು ಬಳಿಯಿದ್ದ ಆರೋಗ್ಯ ಖಾತೆಯನ್ನು ಸುಧಾಕರ್ ಹೆಗಲಿಗೆ ಹೊರಿಸಿದ್ದಾರೆ. ಇನ್ನು ಗೋವಿಂದ ಕಾರಜೋಳ ಅವರು ಲೋಕೋಪಯೋಗಿ ಸಚಿವರಾಗಿ ಮುಂದುವರೆಯಲಿದ್ದಾರೆ. ಈ ನೂತನ ಖಾತೆ ಬದಲಾವಣೆ ಪಟ್ಟಿಗೆ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ.

Related Articles

Back to top button