ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕವನ್ನು ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ನನ್ನ ಹೇಳಿಕೆ ಪ್ರಸ್ತಾಪಿಸಿ ಸಿಎಂ ಸೇರಿದಂತೆ ಮಂತ್ರಿಗಳು ರಾಜೀನಾಮೆ ನೀಡಲಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಶ್ರೀರಾಮುಲು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ, ಆರೋಪಗಳು ಸತ್ಯಕ್ಕೆ ದೂರವಾದದ್ದು, ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ ಎಂದು ಹೇಳುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಎಂದು ಸ್ಪಷ್ಟನೆ ನೀಡಿದ್ದಾರೆ.
ಜನರ ಆರೋಗ್ಯ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಮಂತ್ರಿಗಳು ರಾಜೀನಾಮೆ ನೀಡಲಿ, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ