ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲಿ ಕಡಿಮೆ ಅವಧಿ ಹಾಗೂ ವೆಚ್ಚದಲ್ಲಿ ಕೋವಿಡ್ 19 ಪರೀಕ್ಷೆ ನಡೆಸುವ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಂಡಿದ್ದು, ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಇದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಕೋವಿಡ್-19 ನಿಯಂತ್ರಣ ಕ್ರಮಗಳ ಕುರಿತು ಸಭೆ ನಡೆಸಿದ ಸಚಿವರು, ಕೊರೊನಾ ತಪಾಸಣೆ ಹಾಗೂ ಚಿಕಿತ್ಸೆಗೆ ಸುಧಾರಿತ ಕ್ರಮಗಳನ್ನು ಹಂತಹಂತವಾಗಿ ಅಳವಡಿಸಿಕೊಳ್ಳಲಾಗುತ್ತಿದೆ ಎಂದರು.
ಲಾಕ್‍ಡೌನ್ ಕಾರಣದಿಂದ ರಕ್ತನಿಧಿಯಲ್ಲಿ ರಕ್ತ ಸಂಗ್ರಹ ಪ್ರಮಾಣ ಕಡಿಮೆಯಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು. ಆಸಕ್ತರು ಹೆಲ್ಪ್ಲೈನ್ ಸಂಖ್ಯೆಗೆ ಕರೆ ಮಾಡಿದರೆ ಅವರಿದ್ದ ಜಾಗಕ್ಕೆ ಹೋಗಿ ರಕ್ತ ಸಂಗ್ರಹಿಸಲು ತಿಳಿಸಲಾಗಿದೆ ಎಂದು ಹೇಳಿದರು.
ಇನ್ನು ಈವರೆಗೆ ಕೊರೋನಾ ಸೋಂಕು ತಡೆ ಹೋರಾಟಕ್ಕೆ ಎಲ್ಲರೂ ಪಕ್ಷಾತೀತವಾಗಿ ಬೆಂಬಲ ನೀಡಿದ್ದು ಮುಂದಿನ ಕೆಲವು ತಿಂಗಳೂ ಸಹಕಾರ ನೀಡುವ ಅಗತ್ಯವಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ