ಪ್ರಗತಿವಾಹಿನಿ ಸುದ್ದಿ; ಹಾಸನ: ಕೊರೊನಾ ಸೋಂಕು ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ. ಜನರು ತಾಳ್ಮೆ ಕಳೆದುಕೊಳ್ಳಬಾರದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಜನರ ಜೊತೆಗೆ ಸರ್ಕಾರ ಕೆಲಸ ಮಾಡುತ್ತಿದೆ. ಇಷ್ಟು ದಿನ ನಾವು ತಾಳ್ಮೆಯಿಂದ ಇದ್ದೇವೆ. ಮುಂದೆಯೂ ಯಾರು ತಾಳ್ಮೆ ಕಳೆದುಕೊಳ್ಳಬೇಡಿ. ಕೋವಿಡ್ ನಮ್ಮನ್ನು ಅಷ್ಟು ಬೇಗ ಬಿಟ್ಟು ಹೋಗಲ್ಲ. ನಾವು ಕೂಡ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಶ್ರೀರಾಮುಲು ಹೇಳಿದರು.
ಕೊರಾನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ 5 ವರ್ಷ ಜೈಲು ಗ್ಯಾರಂಟಿ. ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಈಗಾಗಲೇ ಕೆಲವೊಂದು ಚಟುವಟಿಕೆ ಆರಂಭವಾಗಿದೆ. ಮೇ 3ರ ಬಳಿಕವೂ ಲಾಕ್‍ಡೌನ್‍ನಲ್ಲಿ ಸಾಕಷ್ಟು ಸಡಿಲಿಕೆ ಆಗಲಿದೆ. ಆದ್ದರಿಂದ ನಾವು ಆ ಬಳಿಕವೂ ಎಚ್ಚರಿಕೆಯಿಂದ ಇರಬೇಕು.
ಕೊರೊನಾಗೆ ರಾಜ್ಯದಲ್ಲಿ 576 ಮಂದಿಗೆ ಕೊರೊನಾ ಸೋಂಕಿತರಿದ್ದು, ಸಾಕಷ್ಟು ಮಂದಿ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೆಲ ತಜ್ಞರು ನನ್ನನ್ನು ಭೇಟಿ ಮಾಡಿ ಕೆಲ ಸಲಹೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಮತ್ತೆ ಪ್ಲಾಸ್ಮಾ ತೆರಪಿ ಚಿಕಿತ್ಸೆ ಮುಂದುವರಿಸುತ್ತೇವೆ. ಇದರಿಂದ ನಮಗೆ ಒಳ್ಳೆಯದಾಗುತ್ತಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ