ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಕೆಲದಿನಗಳ ಹಿಂದೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಅವರ ತಾಯಿ ಹಾಗೂ ತಮ್ಮನಿಗೂ ಸೋಂಕು ದೃಢಪಟ್ಟಿದೆ.
ಇತ್ತೀಚೆಗಷ್ಟೇ ಕೊರೊನಾ ಸೋಂಕು ತಗುಲಿ ಸಚಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ತಾಯಿ ಹಾಗೂ ತಮ್ಮನಿಗೆ ಕೊರೊನಾ ದೃಢಪಟ್ಟಿದೆ. ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಶ್ರೀರಾಮುಲು ಕೂಡ ಬೌರಿಂಗ್ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಆಗಸ್ಟ್ 9ರಂದು ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸಚಿವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳು ಶ್ರಮಿಸುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ