ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪ್ತ ಸಹಾಯಕ ರಾಜಣ್ಣ ಬಂಧನ ವಿಚಾರವಾಗಿ ಮಾತನಾಡಿದ ಸಚಿವ ಶ್ರೀರಾಮುಲು, ರಾಜಣ್ಣ ನನ್ನ ಪಿಎ ಅಲ್ಲ, ಗೊತ್ತಿರುವ ಹುಡುಗ. ನಮ್ಮ ಜೊತೆ ಕೆಲಸ ಮಾಡುತ್ತಿದ್ದ. ತನಿಖೆ ನಡೆಯುತ್ತಿರುವಾಗ ಮಾತನಾಡುವುದು ತಪ್ಪಾಗುತ್ತೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾರೇ ಆಗಲಿ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು. ತಪ್ಪು ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಿ. ಪ್ರಕರಣದ ಬಗ್ಗೆ ನನ್ನ ಗಮನಕ್ಕೆ ತರಬೇಕಿತ್ತು. ನನ್ನ ಗಮನಕ್ಕೆ ತಂದಿದ್ದರೆ ಸರಿಪಡಿಸಲು ಯತ್ನಿಸುತ್ತಿದ್ದೆ. ಕೂರಿಸಿ ಮಾತನಾಡುತ್ತಿದ್ದೆ. ತಪ್ಪು ಮಾಡಿದ್ದರೆ ಕಾನೂನು ರೀತಿ ಕ್ರಮವಾಗಲಿ. ಎಲ್ಲಿಯೋ ಮಿಸ್ ಕಮ್ಯೂನಿಕೇಷನ್ ಆಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಇಬ್ಬರ ಬಳಿಯೂ ಮಾತನಾಡುತ್ತೇನೆ ಎಂದು ಹೇಳಿದರು.
ಪಕ್ಷದಲ್ಲಿ ಹಿರಿಯರಿಗೆ ಅವಮಾನ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಮುಲು, ಹೌದು. ನಿಮ್ಮ ಪ್ರಶ್ನೆ ಸಮಂಜಸವಾಗಿದೆ ಎಂದು ಹೇಳಿದ್ದಾರೆ.
ಕೋಲಾಹಲ ಎಬ್ಬಿಸಿದ ಆಪ್ತನ ಬಂಧನ; ವಿಜಯೇಂದ್ರ ನಡೆಗೆ ಶ್ರೀರಾಮುಲು ಅಸಮಾಧಾನ
ನಾವು ಹೋದರೆ ಸರ್ಕಾರ ಹೋದಂತೆ ಅಲ್ಲವೇ? – ಸಚಿವ ಸುಧಾಕರ್ ಪ್ರಶ್ನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ