Latest
ಸಚಿವನಾಗಿರುವುದಕ್ಕಿಂತ ಶಾಸಕನಾಗಿರುವುದೇ ಉತ್ತಮ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾತೆ ಬದಲಾವಣೆಯಿಂದ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಶ್ರೀರಾಮುಲು, ಸಚಿವನಾಗಿರುವುದಕ್ಕಿಂತ ಶಾಸಕನಾಗಿರುವುದೇ ಉತ್ತಮ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಖಾತೆ ಬದಲಾವಣೆ ಬೆನ್ನಲ್ಲೇ ತಮ್ಮ ಆಪ್ತರ ಬಳಿ ನೋವು ತೋಡಿಕೊಂಡಿರುವ ಸಚಿವ ಶ್ರೀರಾಮುಲು, ಈಗ ನೀಡಿರುವ ಸಮಾಜ ಕಲ್ಯಾಣ ಇಲಾಖೆ ನಿರ್ವಹಣೆ ಮಾಡುತ್ತೇನೆ. ಆದರೆ ಆರೋಗ್ಯ ಇಲಾಖೆ ಖಾತೆಯಲ್ಲಾದಂತೆ ಇಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು. ಖಾತೆ ನಿರ್ವಹಣೆಗೆ ಮುಕ್ತ ಅವಕಾಶ ನೀಡಬೇಕು. ಖಾತೆ ನಿರ್ವಹಣೆಯಲ್ಲಿ ಮತ್ತೆ ಹಸ್ತಕ್ಷೇಪ ಮಾಡುತ್ತಾರೆ ಎನ್ನುವುದಾದರೆ ನನಗೆ ಕಷ್ಟವಾಗಲಿದೆ. ಸಚಿವನಾಗಿರುವುದಕ್ಕಿಂತ ಶಾಸಕನಾಗಿ ಇರುವುದು ಉತ್ತಮ ಎಂದು ಹೇಳುವ ಮೂಲಕ ರಾಜೀನಾಮೆ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಚಿವ ಶ್ರೀರಾಮುಲು ಬಳಿಯಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಖಾತೆ ಹಿಂಪಡೆದ ಸಿಎಂ ಯಡಿಯೂರಪ್ಪ, ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಿ ಆದೇಶ ಹೊರಡಿಸಿದ್ದಾರೆ.




