ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪರೇಶ್ ಅಧಿಕಾರಿ ಹಾಗೂ ಅವರ ಪುತ್ರಿ ಅಂಕಿತಾ ಅಧಿಕಾರಿ ವಿರುದ್ಧ ಸಿಬಿಐ ಎಫ್ ಐ ಆರ್ ದಾಖಲಿಸಿದೆ.
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಚಿವ ಪರೇಶ್ ಅಧಿಕಾರಿ ಹಾಗೂ ಪುತ್ರಿ ಅಂಕಿತಾ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಸಿಬಿಐ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗುವಂತೆ ಕೋಲ್ಕತ್ತಾ ಹೈಕೋರ್ಟ್ ನಿರ್ದೇಶನ ನೀಡಿತ್ತು.
ಇಂದು ಮಧ್ಯಾಹ್ನ 3 ಗಂಟೆಯವರೆಗೂ ಕಾಲಾವಕಾಶ ನಿಡಲಾಗಿತ್ತು. ಕೋರ್ಟ್ ಸೂಚನೆ ನೀಡಿದರೂ ಸಿಬಿಐ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಚಿವ ಪರೇಶ್ ಅಧಿಕಾರಿ ಹಾಗೂ ಪುತ್ರಿ ಅಂಕಿತಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪಿಯುಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ