

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿರು ಸವದತ್ತಿಯ ಅನುಪಮಾ ಶ್ರೀಶೈಲ ಹಿರೇ ಹೊಳಿ ಹಾಗೂ ಸಾಧನೆಗೈದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಅಭಿನಂದಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 2023 ರ ಎಸ್. ಎಸ್ ಎಲ್ ಸಿ . ಪರಿಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಸೌದತ್ತಿ ತಾಲೂಕು ಕುಮಾರೇಶ್ವರ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅನುಪಮಾ ಶ್ರೀಶೈಲ ಹಿರೇಹೊಳಿ 625/625 ಅಂಕ ಪಡೆದು ಬೆಳಗಾವಿ ಜಿಲ್ಲೆಗೆ ಹೆಮ್ಮೆ ತಂದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಇದೇ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ಫಲಿತಾಂಶದ ವಿವರವನ್ನೂ ಅವರು ನೀಡಿದ್ದಾರೆ. ಫಲಿತಾಂಶದಲ್ಲಿ ರಾಮದುರ್ಗ ಶೇ.92.95 ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದೆ.