*ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಇಂದು*
ಪ್ರಗತಿವಾಹಿನಿ ಸುದ್ದಿ: ರಾಜ್ಯದ್ಯಂತ ಜೂ. 14 ರಿಂದ ಜೂ.22 ರವರಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶ ಇಂದು ಬೆಳಗ್ಗೆ 11.30ಕ್ಕೆ ಪ್ರಕಟಗೊಳ್ಳಲಿದೆ.
ಈ ಹಿಂದೆ ಮೊದಲ ಬಾರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದವರಿಗೆ ಎರಡನೇ ಬಾರಿ ಸಪ್ಲಿಮೆಂಟರ್ ಎಕ್ಸಾಂ ಬರೆಯಲು ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಒಟ್ಟು ಮೂರು ಅವಕಾಶಗಳನ್ನು ವಿದ್ಯಾರ್ಥಿಗಳೀಗೆ ಶಿಕ್ಷಣ ಇಲಾಖೆ ನೀಡಿದ್ದು, ಇದರ ಪೈಕಿ ಎರಡನೇ ಬಾರಿ ಪರೀಕ್ಷೆ ಬರೆದವರ ಫಲಿತಾಂಶ ಇಂದು ಹೊರಬೀಳಲಿದೆ.
ಅಧಿಕೃತ ವೆಬ್‌ಸೈಟ್ https://karresults.nic.in ದಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೆಟ್ ಸಂಖ್ಯೆ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಕಳೆದ ತಿಂಗಳು ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದ್ದು, ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. 1.44 ಲಕ್ಷ ವಿದ್ಯಾರ್ಥಿ, 79,148 ವಿದ್ಯಾರ್ಥಿನಿಯರು ಸೇರಿ ಒಟ್ಟು 2.23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ರ ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ ಒಟ್ಟು 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.
ಅನುತ್ತೀರ್ಣರಾದವರಷ್ಟೇ ಅಲ್ಲ. ಪರೀಕ್ಷೆಯಲ್ಲಿ ಸಮಾಧಾನಕರ ಅಂಕಗಳು ಬಂದಿಲ್ಲವಾದಲ್ಲಿ ಎರಡು ಹಾಗೂ ಮೂರನೇ ಬಾರಿ ಪರೀಕ್ಷೆ ಬರೆಯಲು ಇಲಾಖೆ ಅವಕಾಶ ಮಾಡಿಕೊಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ