Education

*ಎಸ್.ಎಸ್.ಎಲ್.ಸಿ ಪರೀಕ್ಷೆ-2 ಟೈಮ್ ಟೇಬಲ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 7ರಿಂದ ಪರೀಕ್ಷೆ ಆರಂಭವಾಗಲಿದೆ.

ಈ ಬಾರಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಗೆ ಅವಕಾಶ ನೀಡಲಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳಲು ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಜೂನ್ 7ರಿಂದ ಜೂನ್ 14ರವರೆಗೆ ಪರೀಕ್ಷೆ ನಡೆಯಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ

ಜೂನ್ 7, 2024: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ

ಜೂನ್ 8, 2024: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, NSQF ವಿಷಯಗಳು

ಜೂನ್ 10, 2024: ಗಣಿತ/ ಸಮಾಜಶಾಸ್ತ್ರ

ಜೂನ್ 11, 2024: ಎಲೆಕ್ಟ್ರಿಕಲ್ ಇಂಜಿನಿಯರಿಂಗ್ IV, ಮೆಕ್ಯಾನಿಕಲ್ ಇಂಜಿನಿಯರಿಂಗ್-2, ಮೆಕ್ಯಾನಿಕಲ್ ಇಂಜಿನಿಯರಿಂಗ್- IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ -IV, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌, ANSI ‘C’ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್‌, ಅರ್ಥಶಾಸ್ತ್ರ

ಜೂನ್ 12, 2024: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

ಜೂನ್ 13, 2024: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ

ಜೂನ್ 14, 2024: ಸಮಾಜ ವಿಜ್ಞಾನ

Related Articles

Back to top button