
https://youtu.be/GAzgFA7wHyA
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಎಸ್ಎಸ್ಎಲ್ ಸಿ ಪರೀಕ್ಷೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಸಂದೇಶ ಮತ್ತು ಗೊಂದಲದ ಕುರಿತು ಎಸ್ಎಸ್ಎಲ್ ಸಿ ಬೋರ್ಡ್ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪರೀಕ್ಷೆಯ ವೇಳಾಪಟ್ಟಿಯನ್ನು ಪುನರ್ ರೂಪಿಸಲಾಗಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ತೀವ್ರ ಗೊಂದಲ ಉಂಟಾಗಿದೆ. ಸ್ಪಷ್ಟೀಕರಣಕ್ಕಾಗಿ ಸಿಕ್ಕಿದವರಲ್ಲಿ ವಿಚಾರಿಸುತ್ತಿದ್ದಾರೆ. ಪರೀಕ್ಷೆ ಸಿದ್ಧತೆಯಲ್ಲಿರುವ ವಿದ್ಯಾರ್ಥಿಗಳು ತೀವ್ರ ಸಮಸ್ಯೆಯಲ್ಲಿ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ಬೋರ್ಡ್ ನಿರ್ದೇಶಕರು ಈ ಮೊದಲಿನ ವೇಳಾ ಪಟ್ಟಿಯಂತೆಯೇ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗುವುದು ಬೇಡ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ನಂಬದಂತೆ ಅವರು ಮನವಿ ಮಾಡಿದ್ದಾರೆ. ಎಸ್ಎಸ್ಎಲ್ ಸಿ ಪರೀಕ್ಷೆಗಳು ನಿಗದಿಯಂತೆ ಮಾರ್ಚ್ 27ರಿಂದ ಏಪ್ರಿಲ್ 9ರ ವರೆಗೆ ನಡೆಯಲಿದೆ.