EducationKarnataka NewsLatest

*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ*

ಪರೀಕ್ಷೆ ಮುಗಿಯುವವರೆಗೂ ಫೋನ್, ಟೀವಿ ಆಫ್


ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್ .ಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿವೆ. ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರು ಅಭಿಯಾನ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಪೋಷಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಪರೀಕ್ಷೆ ಮುಗಿಯುವವರೆಗೂ ಈ ಕ್ರಮ ಅನುಸರಿಸಲು ಸೂಚಿಸಲಾಗಿದೆ.

ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಮನೆ ಮನೆಗೆ ತೆರಳಿ ಸಂಜೆಯಿಂದ ಮೊಬೈಲ್, ಟಿವಿ ಆಫ್ ಮಾಡುವಂತೆ ವಿದ್ಯಾರ್ಥಿಗಳಿಗೆ ಓದಿಸುವಂತೆ ಹೇಳುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button