EducationKarnataka NewsLatest

*ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೇ ಗಮನಿಸಿ: ಇಂದು ನಡೆಯಬೇಕಿದ್ದ ಪರೀಕ್ಷೆ ನಾಳೆಗೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಇಂದು ನಡೆಯಬೇಕಿದ್ದ ತೃತಿಯ ಭಾಷೆಯ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಿಸಿದ್ದ ಸಾರ್ವತ್ರಿಕ ರಜೆಯನ್ನು ಮಾರ್ಚ್ 31ರ ಬದಲಾಗಿ ಮಾರ್ಚ್ 30ಕ್ಕೆ ಸೋಮವಾರದಂದು ಬದಲಾಯಿಸಿ ಆದೇಶ ಹೊರಡಿಸಿದೆ.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ದಿನಾಂಕವನ್ನು ಒಂದು ದಿನ ಮುಂದೂಡಾಗಿದೆ.

ಮಾರ್ಚ್ 31ರಂದು ಮಂಗಳವಾರ ತೃಟಿಯ ಭಾಷೆಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಸಮಯ ಹಾಗೂ ಕೇಂದ್ರದಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲಾ ವಿಷಯಗಳ ಪರೀಕ್ಷೆಗಳು ಮೊದಲು ನಿಗದಿ ಪಡಿಸಿದ ವೇಳಾಪಟ್ಟಿಯಂತೆ ನಡೆಯಲಿದೆ.

Home add -Advt

Related Articles

Back to top button