
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನ ಭೀತಿ ನಡುವೆಯೂ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಗಿದಿದೆ. 7,61,506 ವಿದ್ಯಾರ್ಥಿಗಳು ಈ ಬಾರಿಯ ಎಸ್ಎಲ್ಎಲ್ಸಿ ಪರೀಕ್ಷೆ ಬರೆದಿದ್ದರು. ಈ ಪೈಕಿ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ.
ರಾಜ್ಯದಲ್ಲಿ ಜೂನ್ 25ರಿಂದ ಜು.4ರವರೆಗೆ ಪರೀಕ್ಷೆ ನಡೆದಿದ್ದು, ಕೊರೋನಾ ಹೆಚ್ಚುತ್ತಿದ್ದರೂ ಸರ್ಕಾರ ಪರೀಕ್ಷೆ ನಡೆಸುತ್ತಿರುವುದಕ್ಕೆ ಪೋಷಕರು, ವಿಪಕ್ಷ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಗತ್ಯ ಮುಂಜಾಗೃತಾ ಕ್ರಮ ಕೈಗೊಂಡು ಸರ್ಕಾರ ಎಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿತ್ತು. ಹೀಗೆ ಪರೀಕ್ಷೆ ಬರೆದವರಲ್ಲಿ 32 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಪತ್ತೆ ಆಗಿದೆ.
ಕೊರೋನಾ ಸೋಂಕು ಪತ್ತೆಯಾದ 32 ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ 80 ವಿದ್ಯಾರ್ಥಿಗಳನ್ನು ಹೋಮ್ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇವರಲ್ಲಿ ಲಕ್ಷಣ ಕಂಡು ಬಂದರೆ ಆಸ್ಪತ್ರೆಗೆ ದಾಖಲು ಮಾಡಲು ನಿರ್ಧರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ