Latest

ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಿ; ಶಿಕ್ಷಣ ಸಚಿವರ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್.ಎಸ್.ಎಲ್.ಸಿ ಪರೀಕ್ಷೆ ನಾಳೆಯಿಂದ ಆರಂಭವಾಗುತ್ತಿದ್ದು, ಸರ್ಕಾರದ ಸಮವಸ್ತ್ರ ನೀತಿ ಅನ್ವಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಮವಸ್ತ್ರ ಕಡ್ಡಾಯ ನಿಯಮದಲ್ಲಿ ಯಾವುದೆ ಬದಲಾವಣೆ ಇಲ್ಲ. ಹಿಜಾಬ್ ವಿಚಾರವಾಗಿ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೇ ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿದರು.

Related Articles

ಹಿಜಾಬ್ ವಿಚಾರವಾಗಿ ಪರೀಕ್ಷೆಗೆ ಗೈರಾದರೆ ಮತ್ತೆ ಪರೀಕ್ಷೆ ಇಲ್ಲ. ವಿದ್ಯಾರ್ಥಿನಿಯರು ಶಾಲೆವರೆಗೆ ಹಿಜಾಬ್ ಹಾಕಿಬರಬಹುದು ಆದರೆ ಪರೀಕ್ಷಾ ಕೇಂದ್ರದ ಒಳಗೆ ಹಿಜಾಬ್ ಗೆ ಅವಕಾಶವಿಲ್ಲ. ಯಾವುದೇ ಗೊಂದಲಗಳಿಗೆ ಕಿವಿಗೊಡದೇ ಪರೀಕ್ಷೆ ಬಗ್ಗೆ ಗಮನಹರಿಸಿ. ಖುಷಿ ಖುಷಿಯಾಗಿ ಪರೀಕ್ಷೆ ಬರೆಯಿರಿ ಎಂದರು.

ಬಾಹ್ಯ, ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಯಾವುದೇ ಸಮವಸ್ತ್ರ ಅವಶ್ಯಕತೆ ಇಲ್ಲ. ರೆಗ್ಯೂಲರ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ. ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಸರ್ಕಾರ ಸೂಚಿಸಿದ ಯುನಿಫಾರ್ಮ್ ಹಾಗೂ ಖಾಸಗಿ ಶಾಲೆ ವಿದ್ಯಾರ್ಥಿಗಳು ಆಯಾ ಖಾಸಗಿ ಶಾಲೆಯ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಸ್ಪಷ್ಟಪಡಿಸಿದರು.

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button