ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ನಾಳೆಯಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ.ಪರೀಕ್ಶೆಗೆ ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರಳ ರೀತಿಯಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಸಿಎಂ ಬದ್ಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಶೆ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಭಯವಿಲ್ಲದೇ ಪರೀಕ್ಷೆ ಬರೆಯಿರಿ. ಯಾವುದೆ ಆತಂಕಗಳು ಬೇಡ, ಅತ್ಯಂತ ಸರಳ ರೀತಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಹಿಜಾಬ್ ಕುರಿತಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಹಿಜಾಬ್ ವಿಚಾರವಾಗಿ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ. ತೀರ್ಪು ಬಂದ ಮೇಲೆ ಈ ರೀತಿ ಅನಗತ್ಯ ಹೇಳಿಕೆ ನೀಡುವುದು ಸರಿಯಲ್ಲ. ಹೈಕೋರ್ಟ್ ತೀರ್ಪನ್ನು ಪಾಲಿಸಬೇಕು ಅನವಶ್ಯಕ ವಿವಾದ ಸೃಷ್ಟಿಸು ಹೋಗಬಾರದು ಎಂದು ಹೇಳಿದರು.
ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದ ಯೋಜನೆಗಳಿಗೆ 3,000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 30ರೊಳಗೆ ಇನ್ನಷ್ಟು ಯೋಜನೆಗಳಿಗೆ ಕಾರ್ಯಾದೇಶ ನೀಡಲಾಗುವುದು ಎಂದು ತಿಳಿಸಿದರು.
ಸತತ 5ನೇ ದಿನವೂ ಏರಿಕೆಯಾದ ಪೆಟ್ರೋಲ್-ಡೀಸೆಲ್ ದರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ